ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಕಾಲೇಜಿನ ರೋವರ್ಸ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ಕಾಲೇಜಿನ ರೋವರ್ಸ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ, ರೇಂಜರ್ ಲೀಡರ್ ಶ್ರೀಮತಿ ಅವಿತಾ ಕೊರೆಯಾ ನೇತೃತ್ವದಲ್ಲಿ ಕಾಲೇಜಿನ ರೋವರ್ಸ ಮತ್ತು ರೇಂಜರ್ಸ್ ಸ್ವಯಂ ಸೇವಕರು ಸರ್ವಧರ್ಮ ಪ್ರಾರ್ಥನೆಯಲ್ಲಿ ಭಾಗಿಯಾದರು.