ಹೆಮ್ಮಾಡಿ(ಆ,10): ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ನಲ್ಲಿ ಸ್ಪರ್ಧಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ವಿದ್ಯಾರ್ಥಿ ತೇಜಸ್ವಿ ಮಿಥುನ್ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.