ಕುಂದಾಪುರ (ಅ.15): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ 07 ದಿನಗಳ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆದೂರು ಇಲ್ಲಿ ಉದ್ಘಾಟನೆಗೊಂಡಿತು.
ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಶಾನಾಡಿ ಶ್ರೀ ಸಂಪತ್ ಕುಮಾರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಈ ಶಿಬಿರದ ನೇತೃತ್ವ ವಹಿಸಿರುವ ಶ್ರೀ ಪ್ರಶಾಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೆದೂರು ಶ್ರೀ ಸಿದ್ಧಿ ವಿನಾಯಕ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕರಾದ ಶ್ರೀ ಅರುಣ ಕುಮಾರ ಶೆಟ್ಟಿ ಎಲ್ಲಾ ಶಿಬಿರಾರ್ಥಿಗಳಿಗೆ ಸಮವಸ್ತ್ರ ನೀಡಿದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೋಭಾ ಶೆಟ್ಟಿ, ಕಾಳಾವರ ಕೊರ್ಗಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀ ಕೆ. ರತ್ನಾಕರ ಶೆಟ್ಟಿ, ಕೆದೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಭಂಡಾರಿ, ಪಂಚಾಯತ್ ಸದಸ್ಯರಾದ ಶ್ರೀ ವಿಜಯ ಕುಮಾರ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕುಶಲ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಪ್ರಾಸ್ತಾವಿಕ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ವನಿತಾ ನಾಯ್ಕ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಸಹ ಸಂಚಾಲಕರದಾದ ಶ್ರೀ ಸುಕೇಶ ಚಂದ್ರಶೇಖರ ವಂದಿಸಿದರು. ಉಪನ್ಯಾಸಕರಾದ ಕಾಳಾವರ ಶ್ರೀ ಉದಯ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.