ಮಹಿಳೆಯರು ತಮ್ಮ ಬದುಕಿನ ಸೂಕ್ಷ್ಮತೆಗಳನ್ನು ಅರಿತು ಇತರರೊಂದಿಗೆ ವ್ಯವರಿಸಬೇಕು. ಶೋಷಣೆ, ಕಿರುಕುಳಕ್ಕೊಳಗಾದಾಗ ಸೂಕ್ತ ಕಾನೂನಿನ ಸಲಹೆ ಪಡೆದುಕೊಂಡು ಶೋಷಣೆಯಿಂದ ಮುಕ್ತರಾಗಬೇಕು ಎಂದು ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆ ಉಡುಪಿ ಇದರ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ ಹೇಳಿದರು. ಅವರು ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಲೈಂಗಿಕ ದೌರ್ಜನ್ಯ ತಡೆ ಘಟಕ ಫೆಬ್ರವರಿ 02 ರಂದು ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ ಸವಾಲುಗಳು ಹಾಗೂ ಮಹಿಳಾ ಹಕ್ಕುಗಳ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳ ದುರುಪಯೋಗ ಮಹಿಳೆಯರ ಸ್ಥಿತಿಗತಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವುದು ದುರದೃಷ್ಟಕರ, ಮಹಿಳೆಯರು ಈ ಕುರಿತಾಗಿ ಗಂಭೀರ ಚಿಂತನೆ ನಡೆಸಬೇಕು ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಘಟಕದ ಸಂಯೋಜಕ ರಾಗಿರುವ ಜ್ಯೋತಿ ಮೊಗವೀರ ಸ್ವಾಗತಿಸಿದರು. ವಿದ್ಯಾರ್ಥಿ ಸುಶಾಂತ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಸಹ ಸಂಯೋಜನಾಧಿಕಾರಿ ಶ್ವೇತಾ ಯು. ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಸುಚಿತ್ರಾ ನಿರೂಪಿಸಿದರು.