ಕುಂದಾಪುರ (ಅ. 25) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್.ಸಿ.ಸಿ. ಘಟಕ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಮಾಹಿತಿ ಮತ್ತು ಶಿಕ್ಷಣ ವಿಭಾಗ, ಕುಂದಾಪುರ ತಾಲೂಕು ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ತಾಲೂಕು ಆರೋಗ್ಯ ಅಧಿಕಾರಿ ಡಾ| ಪ್ರೇಮಾನಂದ ಕೆ. ಅವರು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಇರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭ ಅವರು ವಿದ್ಯಾರ್ಥಿಗಳು ದೈಹಿಕ ಕ್ಷಮತೆಯ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಗಮನಕೊಡಬೇಕು. ಹಾಗೆಯೇ ಉತ್ತಮ ಆಹಾರ ಪದ್ಧತಿಯ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ರೂಪಿಸಿಕೊಳ್ಳಬೇಕಾಗಿರುವುದು ವರ್ತಮಾನದ ತುರ್ತು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಈ ಸಂದರ್ಭ ಎನ್.ಸಿ.ಸಿ. ಅಧಿಕಾರಿ ಶ್ರೀ ಹರೀಶ್ ಬಿ., ತಾಲೂಕು ಆರೋಗ್ಯ ಇಲಾಖೆಯ ಸಿಬ್ಬಂಧಿಗಳಾದ ಶ್ರೀಮತಿ ಭಾಗ್ಯಲಕ್ಷ್ಮೀ , ವಸಂತ್ ಉಪಸ್ಥಿತರಿದ್ದರು.
ಎನ್.ಸಿ.ಸಿ. ಅಧಿಕಾರಿ ಶ್ರೀ ಶರತ್ ಕುಮಾರ್ ವಂದಿಸಿ, ಎನ್.ಎಸ್.ಎಸ್ ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸುಹಾಸ್ ಮಲ್ಯ ಪ್ರಾರ್ಥಿಸಿದರು.