ಕುಂದಾಪುರ(ಆ,31) :ದೇಶದ ಮೊದಲ ಗ್ರಹ ಮಂತ್ರಿ, ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ, ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ ವನ್ನು ಆಚರಿಸಲಾಯಿತು.
ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಶ್ರೀ ಭುಜಂಗ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್
ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ವನಿತಾ ನಾಯ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆʼಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.