ವಕ್ವಾಡಿ( ಆ,31): ಕರ್ನಾಟಕ ಸರಕಾರ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಮತ್ತು ಉಪಕೇಂದ್ರ ವಕ್ವಾಡಿ , ಗ್ರಾಮಪಂಚಾಯತ್ ಕಾಳಾವರ, ಯುವಶಕ್ತಿ ಮಿತ್ರ ಮಂಡಳಿ (ರಿ) ಹೆಗ್ಗಾರ್ ಬೈಲ್ ವಕ್ವಾಡಿ ಹಾಗೂ ಕೆ.ಎಂ.ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 31 ರಂದು ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಸಾರ್ವಜನಿಕ ಸಮುದಾಯ ಭವನ ವಕ್ವಾಡಿ ಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಳವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಂಜುನಾಥ್ ಶೆಟ್ಟಿಗಾರ್ ರವರು ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಇದರ ಆಡಳಿತ ವೈದ್ಯಾಧಿಕಾರಿ ಡಾ. ಪ್ರತಾಪ್,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಶ್ರೀ ಸತ್ಯರಂಜನ್ ಹೆಗ್ಡೆ,ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರಾಮಚಂದ್ರ ನಾವುಡ, ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ಯುವಶಕ್ತಿ ಮಿತ್ರ ಮಂಡಲ (ರಿ) ಹೆಗ್ಗಾರ್ ಬೈಲು ವಕ್ವಾಡಿಯ ಅಧ್ಯಕ್ಷರಾದ ಶ್ರೀ ವಿಜಯ್ ಪೂಜಾರಿ, ಕೆ. ಎಂ.ಸಿ ಮಣಿಪಾಲ ವೈದ್ಯಾಧಿಕಾರಿ ಡಾ. ಅಂಜನಾ ಹಾಗೂ ತಂಡ, ಆರೋಗ್ಯ ಇಲಾಖೆಯ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ದೀಪಾ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀ ಪ್ರಶಾಂತ್ ಕುಮಾರ್ ವೈ, ಸಮುದಾಯ ಆರೋಗ್ಯಾಧಿಕಾರಿ ಪ್ರಿಯಾ ಡಿಸೋಜ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಶ್ಯಾಮಲ, ಶೋಭಾ, ಯಶೋಧ, ಮಲ್ಲಿಕಾ, ಶೈಲ, ಯುವಶಕ್ತಿಯ ಮಾಜಿ ಅಧ್ಯಕ್ಷರಾದ ಉಮೇಶ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ರಾಕೇಶ್ ಶೆಟ್ಟಿ ವಕ್ವಾಡಿ ನಿರೂಪಿಸಿ ವಂದಿಸಿದರು. ವಕ್ವಾಡಿಯ 100 ಕ್ಕೂ ಹೆಚ್ಚು ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಂಡರು.