ಕುಂದಾಪುರ(ಆ,31):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾತಂತ್ರ್ಯ ಭಾರತದ ಪ್ರಥಮ ಗ್ರಹ ಸಚಿವ,ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮ ದಿನಾಚರಣೆ ಸಲುವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಅಕ್ಟೋಬರ್ 31 ರಂದು ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್.ಯೋಜನಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದು, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಎನ್.ಎಸ್.ಎಸ್. ಘಟಕದ ಇನ್ನೋರ್ವ ಯೋಜನಾಧಿಕಾರಿ ದೀಪಾ ಪೂಜಾರಿ ಹಾಗೂ ಪ್ರಾಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಕಾಲೇಜಿನ ಎನ್.ಎಸ್.ಎಸ್ ಘಟಕದ ಸ್ವಯಂಸೇವಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.