ಕುಂದಾಪುರ (ನ.27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ ಸಹಯೋಗದಲ್ಲಿ ಕುಂದಾಪುರ ಘಟಕದ ಆತಿಥ್ಯದಲ್ಲಿ ಕುಂದಾಪುರದ ಮೊಗವೀರ ಭವನದಲ್ಲಿ ನವೆಂಬರ್ 26 ರಂದು ನಡೆದ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ-ಸಂಗಮ ದಲ್ಲಿ ಹೆಮ್ಮಾಡಿ ಘಟಕವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ನಿಮ್ಮ ಆಯ್ಕೆ ವಿಭಾಗದಲ್ಲಿ ಪ್ರಥಮ ಸ್ಥಾನ, ಸಿನಿಮಾ ನ್ರತ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಹಸನ ವಿಭಾಗದಲ್ಲಿ ದ್ವೀತಿಯ ಸ್ಥಾನವನ್ನು ಪಡೆಯುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜ ಜಿ ಶಂಕರ್ ರವರು ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಿದರು.
10 ಕ್ಕೂ ಹೆಚ್ಚು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಸಾಲಿಗ್ರಾಮ ಘಟಕ ದ್ವಿತೀಯ ಸ್ಥಾನವನ್ನು ಪಡೆದಿದೆ. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ರಾಜೇಂದ್ರ ಹಿರಿಯಡ್ಕ ,ಕುಂದಾಪುರ ಘಟಕದ ಅಧ್ಯಕ್ಷರಾದ ಚಂದ್ರಹಾಸ ಕೋಣಿ ,ಮೊಗವೀರ ಸಂಘ(ರಿ), ಬೆಂಗಳೂರು ಇದರ ಅಧ್ಯಕ್ಷರಾದ ಗುಣಕರ, ಉದಯ್ ಕುಮಾರ್ ಹಟ್ಟಿಯಂಗಡಿ,ಡಾ| ನಾಗೇಶ್, ಕೆ.ಕೆ.ಕಾಂಚನ್ ,ಶಿವರಾಮ ಕೋಟ,ಸದಾನಂದ ಬಳ್ಕೂರು ,ವಿಜಯ್ ಕುಮಾರ್,ರಾಮ ನಾಯ್ಕ, ರವೀಂದ್ರ ಪುತ್ರನ್ ,ಹಾಗೂ ಸರಸ್ವತಿ ಎಸ್. ಪುತ್ರನ್ ಉಪಸ್ಥಿತರಿದ್ದರು.
ವರದಿ: ಪ್ರವೀಣ ಮೊಗವೀರ ಗಂಗೊಳ್ಳಿ