ಹೆಮ್ಮಾಡಿ ( ಡಿ,06): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಡಿಸೆಂಬರ್ 05 ರಿಂದ ಡಿಸೆಂಬರ್ 25 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಕಟ್ಟಡದಲ್ಲಿರುವ ಬ್ಲೂ ಸ್ಕೈ ಸ್ಟುಡಿಯೋದಲ್ಲಿ ನಡೆಯಲಿದೆ.
ಯಾವುದೇ ಜಾತಿ ,ಮತ ,ಧರ್ಮ ಬೇಧ ಭಾವ ಇಲ್ಲದೆ ಜಿ.ಶಂಕರ್ ಮಣಿಪಾಲ್ ಆರೋಗ್ಯ ಕಾರ್ಡ್ ನ್ನು ಸಾರ್ವಜನಿಕರು ನೋಂದಣಿ ಮಾಡಿಕೊಂಡು ಆರೋಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ಹೆಮ್ಮಾಡಿ ಭಾಗದ ಸಾರ್ವಜನಿಕರು ಈ ಆರೋಗ್ಯ ಕಾರ್ಡನ್ನು ಹೆಮ್ಮಾಡಿ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಕಟ್ಟಡದಲ್ಲಿರುವ ಬ್ಲೂ ಸ್ಕೈ ಸ್ಟುಡಿಯೋದಲ್ಲಿ ನೋಂದಣಿ ಮಾಡಿಕೊಳ್ಳಲು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ.ರ್. ಕುಂದರ್ ತಿಳಿಸಿದ್ದಾರೆ.
ಆರೋಗ್ಯ ಸುರಕ್ಷಾ ಕಾರ್ಡ್ ಮಾಡಿಸಲು ಬೇಕಾಗುವ ದಾಖಲೆಗಳು
ರೇಷನ್ ಕಾರ್ಡ್ ಪ್ರತಿ ಹಾಗೂ ಕುಟುಂಬದ ಪ್ರತಿ ಸದಸ್ಯರ ಆಧಾರ್ ಕಾರ್ಡ್ ಪ್ರತಿ ಮತ್ತು 1700 ರೂಪಾಯಿ