ಕುಂದಾಪುರ ( ಡಿ.11): ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2023 -2024 ನೇ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ ಆನಂದ ಅಡಿಗ ರವರು ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು , ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ರೋವರ್ಸ್ ಘಟಕದ ಸಂಯೋಜಕರಾದ ಶ್ರೀ ಪ್ರವೀಣ ಮೊಗವೀರ ಗಂಗೊಳ್ಳಿ ಸ್ವಾಗತಿಸಿದರು. ರೇಂಜರ್ಸ್ ಘಟಕದ ಸಂಯೋಜಕರಾದ ಅವಿತಾ ಕೊರೆಯಾ ವಂದಿಸಿದರು, ವಿದ್ಯಾರ್ಥಿ ಪ್ರತಿನಿಧಿಗಳಾದ ಶಮಂತ್ ಹಾಗೂ ಅನುಶಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ಹುತಾತ್ಮರಾದ ಸೈನಿಕ ಕ್ಯಾಪ್ಟನ್ ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರೇಂಜರ್ಸ್ ಸ್ವಯಂಸೇವಕಿ ದೀಪಾ ಅತಿಥಿಗಳನ್ನು ಪರಿಚಯಿಸಿ, ಸಮೃದ್ಧಿ ಕಿಣಿ ನಿರೂಪಿಸಿದರು. ಬೋಧಕ ಮತ್ತು ಬೋಧಕೇತರರು ಉಪಸ್ಥಿತರಿದ್ದರು.










