ಕುಂದಾಪುರ (ಡಿ.21): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮೂಲಕ ರಾಜ್ಯ ಅಂಗಾoಗ ಮತ್ತು ಅಂಗಾoಶ ಕಸಿ ಸಂಘಟನೆ (ಸೊಟ್ಟೊ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗಾAಗ ದಾನದ ಕುರಿತು ಅರಿವು ಮತ್ತು ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಾನ್ಸ್ಪ್ಲಾಂಟ್ (ಕಸಿ) ಸಂಯೋಜಕರಾದ ಶ್ರೀಮತಿ ಪದ್ಮಾ ಅವರು ಅಂಗಾoಗ ದಾನದ ಮಹತ್ವ ಹಾಗೂ ನೋಂದಣಿ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ಕೆಲವು ಘಟನೆಗಳನ್ನು ಉದಾಹರಿಸಿ, ಯುವ ಜನತೆ ಅಂಗಾoಗ ದಾನದ ಕುರಿತು ತಾವು ಅರಿವು ಮೂಡಿಸಿಕೊಳ್ಳುವುದರ ಜತೆಗೆ ಇತರರಿಗೆ ಮಾಹಿತಿಯನ್ನು ನೀಡುವ ಕೆಲಸ ಮಾಡಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿಯಾದ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಪ್ರತಿನಿಧಿ ಶೃದ್ಧಾ ವಂದಿಸಿದರು.