ಕುಂದಾಪುರ (ಡಿ.27): ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ವೈಯಕ್ತಿಕವಾಗಿ ತೃತೀಯ ಬಿ.ಬಿ.ಎ. ಸ್ವಸ್ತಿಕ್ ಕಾರ್ಟೂನಿಂಗ್ನಲ್ಲಿ ಪ್ರಥಮ ಸ್ಥಾನ, ತೃತೀಯ ಬಿ.ಕಾಂ. ಮನೀಷ್ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಬಿ.ಕಾಂ. ವಿನಾಯಕ ಫೋಟೋಗ್ರಾಫಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ದ್ವಿತೀಯ ಸಮಗ್ರ ಪುರಸ್ಕಾರವನ್ನು ಪಡೆದುಕೊಂಡಿದ್ದು, ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.