ಕುಂದಾಪುರ ( ಜ.02): ವಿದ್ಯಾರ್ಥಿಗಳ ಜೀವನದಲ್ಲಿ ಹಲವಾರು ಅವಕಾಶಗಳು ಬರುತ್ತವೆ. ಕೇವಲ ಒಂದೇ ಗುರಿ ನಮ್ಮದಾಗಬಾರದು. ನಮ್ಮ ಆಯ್ಕೆ ಮುಕ್ತವಾಗಿರಬೇಕು ಎಂದು ಮಣಿಪಾಲ ಡಾಟ್ ನೆಟ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ಹೇಳಿದರು.
ಅವರು ಕುಂದಾಪು ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ ವೃತ್ತಿ ಮಾರ್ಗದರ್ಶನ ಕಾರ್ಯಗಾರದಲ್ಲಿ ಮಾತನಾಡಿದರು. ಪಿಯುಸಿಯಲ್ಲಿ ಯಾವ ಯಾವ ವಿಷಯಗಳನ್ನು ಆಯ್ದುಕೊಂಡರೆ ಮುಂದೆ ಯಾವ ಯಾವ ವೃತಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು ಎಂದು ತಿಳಿಸಿದರು.
ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶುಭಾ ಕೆ. ಎನ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.