ಹೆಮ್ಮಾಡಿ (ಜ.20): ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಜನವರಿ 19 ರಂದು ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಮೊಗವೀರ ಯುವ ಸಂಘಟನೆ(ರಿ.), ಉಡಯಪಿ ಜಿಲ್ಲೆ ಇದರ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಹಿರಿಯಡ್ಕ ಅವರು ಆಗಮಿಸಿ ಹೆಮ್ಮಾಡಿ ಘಟಕದ ಸೇವೆಯನ್ನು ಶ್ಲಾಘಿಸಿದರು.
ಈ ಸಂರ್ಭದಲ್ಲಿ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್.ಕುಂದರ್ ಹಾಗೂ ಸಂಘಟನೆಯ ಪದಾಧಿಕಾರಿಗಳು, ಘಟಕದ ಮಾಜಿ ಅಧ್ಯಕ್ಷರಾದ ರಾಜೀವ ಶ್ರೀಯಾನ್ ಗುಜ್ಜಾಡಿ ,ಮೊಗವೀರ ಮಹಾಜನ ಸೇವಾ ಸಂಘ (ರಿ),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಸದಸ್ಯರಾದ ಬಿ.ಆರ್ .ನಾಯ್ಕ್ ,ಸ್ತ್ರೀ ಶಕ್ತಿ ಬಗ್ವಾಡಿ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಚಂದನ್ ಹಾಗೂ ಸದಸ್ಯರು , ಶ್ರೀ ಮಹಿಷಾಸುರ ಮರ್ದಿನಿ ಭಕ್ತವ್ರಂದ ಬೆಂಗಳೂರು ಇದರ ಸ್ಥಾಪಕ ಅಧ್ಯಕ್ಷ ಶ್ರೀಧರ್ ಬಗ್ವಾಡಿ ಉಪಸ್ಥಿತರಿದ್ದು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ಹೆಮ್ಮಾಡಿ ಘಟಕದ ಕಾರ್ಯದರ್ಶಿ ಪ್ರವೀಣ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.