ಕುಂದಾಪುರ(ಜ,20): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ, ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ನ ಪಿ ಎಸ್ ಐ ಆಗಿರುವ ಶ್ರೀ ಪವನ್ ನಾಯಕ್ ಹಾಗೂ ಪಿ ಎಸ್ ಐ ಶ್ರೀ ನೂತನ್ ಡಿ ಇ ಅವರು ಆಗಮಿಸಿದ್ದರು. ಪವನ್ ನಾಯಕ್ ಅವರು ಮಾತನಾಡಿ ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ,ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಆಪರಾಧ ಆಗದಂತೆ ನೋಡಿಕೊಳ್ಳುವುದು ಉತ್ತಮ, ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಕೈ ಜೋಡಿಸಬೇಕು ಹಾಗೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರೆ ನೀಡಿದರು.
ಇನ್ನೋರ್ವ ಅತಿಥಿಯಾಗಿರುವ ಶ್ರೀ ನೂತನ್ ಅವರು ಸೈಬರ್ ಕ್ರೈಮ್ ಇದರ ಪರಿಣಾಮಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ|ಅಬ್ದುಲ್ ಕರೀಮ್ , ಉಪ ಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊಫೆಸರ್ ಬಾಲನಾಗೇಶ್ವರ್ ಎಸ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಹಾಗೂ ಐ ಕ್ಯು ಎ ಸಿ ಹೆಡ್ ಪ್ರೊಫೆಸರ್ ತಿಮ್ಮಪ್ಪ ಡಿ ಎಸ್, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಧ್ಯಾಪಕಿ ಸುಷ್ಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.