ಗಂಗೊಳ್ಳಿ: ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ಪ್ರಸಿದ್ದ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿಜಾತ್ರೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಗಂಗೊಳ್ಳಿ ವತಿಯಿಂದ “ಚಾಯ್ ಪೇ ಜಾತ್ರಾ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾರಿಜಾತ್ರೆಗೆ ಆಗಮಿಸಿದ ಸಾವಿರಾರು ಭಕ್ತಾಧಿಗಳಿಗೆ ಉಚಿತ ಚಹಾ ಹಾಗೂ ಲಘುಉಪಹಾರ ವ್ಯವಸ್ಥೆ ಮಾಡಲಾಗಿತ್ತು.ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಭಕ್ತಾಧಿಗಳಿಗೆ ಚಹಾ ನೀಡುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಬಿಜೆಪಿ ಮೀನುಗಾರರ ಪ್ರಕೋಷ್ಠ ರಾಜ್ಯ ಸಂಚಾಲಕರಾದ ಶ್ರೀ ಯಶ್ ಪಾಲ್ ಸುವರ್ಣ ಚಹಾ ತಯಾರಿಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ , ಗುಜ್ಜಾಡಿ ಗ್ರಾಮಪಂಚಾಯತ್ ಸದಸ್ಯ ಹರೀಶ್ ಮೇಸ್ತ, ಉಡುಪಿ ಜಿಲ್ಲಾ ಮೀನುಗಾರ ಪ್ರಕೋಷ್ಠದ ಸಹ ಸಂಚಾಲಕ ಸಂದೀಪ ಖಾರ್ವಿ, ಬಿ.ಜೆ.ಪಿ ಬೈಂದೂರು ಮಂಡಲ ಯುವಮೋರ್ಚದ ಕಾರ್ಯದರ್ಶಿ ನೀತಿನ್ ಖಾರ್ವಿ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಬಿಜೆಪಿಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.