ಕುಂದಾಪುರ (ಜ.23): ಶಿಕ್ಷಣ ಮಂತ್ರ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಇವಳು ನವದೆಹಲಿಯಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ಪೆರೆಡ್ಗೆ ಆಯ್ಕೆಯಾಗಿ ಕರ್ನಾಟಕ ವನ್ನು ಪ್ರತಿನಿಧಿಸಲಿದ್ದಾಳೆ.
ಮಾನ್ಯ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ನಡೆಯುವ ಸಮಾರಂಭದಲ್ಲಿ ತನ್ನ ನೃತ್ಯ ಪ್ರದರ್ಶನವನ್ನು ನೀಡಲಿದ್ದಾಳೆ. ಸಂಸ್ಥೆಯ ಅಧ್ಯಕ್ಷರೂ, ಸಂಚಾಲಕರೂ ಆಗಿರುವ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ ಮತ್ತು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಈಕೆಯನ್ನು ಅಭಿನಂದಿಸಿದ್ದಾರೆ.