ಕುಂದಾಪುರ (ಜ,26) : ದೇಶದ ಅಭಿವೃದ್ಧಿ ಜನರ ಏಕತೆ ಮತ್ತು ದೇಶಾಭಿಮಾನದಿಂದ ಸಾಧ್ಯ. ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ ಬೆಳೆಸಿಕೊಳ್ಳಬೇಕು ಆ ಮೂಲಕ ಬಲಿಷ್ಟ ರಾಷ್ಟ್ರ ನಿರ್ಮಾಣವಾಗಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಫಥ ಸಂಚಲನದ ಗೌರವವನ್ನು ಸ್ವೀಕರಿಸಿ, ಧ್ವಜಾರೋಹಣ ಮಾಡಿ ಮಾತನಾಡಿದರು.
ಈ ಸಂದರ್ಭ ಭಾರತೀಯ ಸೇನೆಯ ನಿವೃತ್ತ ಸೈನಿಕ ಗಣಪತಿ ಎಮ್. ಯಳಜಿತ್ ಯವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಶ್ರೀ ಹರೀಶ್ ಬಿ., ಶ್ರೀ ಶರತ್ ಕುಮಾರ್, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.