ಕುಂದಾಪುರ (ಜ,26) : ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಸಮಾನ ಮನಸ್ಕರಾಗಿ ಕರ್ತವ್ಯ ನಿರ್ವಹಿಸುವುದರೊಂದಿಗೆ ತಮ್ಮ ನೋವು-ನಲಿವುಗಳಲ್ಲಿ ಸ್ಪಂದಿಸುವoತಾದಾಗ ಮಾನಸಿಕವಾಗಿ ಒಂದುಗೂಡಿ ಕೆಲಸ ಮಾಡಲು ಸಾಧ್ಯ. ಹೀಗಾಗಿ ಇಂತಹ ಸಂಘಗಳು ನಮ್ಮೊಳಗಿನ ಯೋಚನೆಯನ್ನು ಪ್ರಚುರಪಡಿಸುತ್ತದೆ ಎಂದು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು.
ಅವರು ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಣಿತಶಾಸ್ತ್ರ ಉಪನ್ಯಾಸಕಿ ನಿರ್ಮಲ ಪ್ರಾರ್ಥಿಸಿದರು. ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿಯಾದ ಶ್ರೀ ಮಹೇಶ್ ನಾಯ್ಕ್ ಆಯ-ವ್ಯಯ ಪಟ್ಟಿ ಮಂಡಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.
ಈ ಸಂದರ್ಭ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪಿಹೆಚ್.ಡಿ. ಪದವಿ ಪಡೆದ ಕಾಲೇಜಿನ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿಯವರನ್ನು ಹಾಗೂ ಸರಕಾರಿ ಉದ್ಯೋಗ ನಿಮಿತ್ತ ಸಂಸ್ಥೆಯಿoದ ನಿರ್ಗಮಿಸಿದ ಮೋನಿಕಾ ಡಿಸೋಜಾ ಅವರನ್ನು ಗೌರವಿಸಲಾಯಿತು. ಸಿಬ್ಬಂದಿಗಳಿಗೆ ಆಯೋಜಿಸಿದ ಕ್ರೀಡಾಕೂಟ ‘ಸಂಗಮ’ದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ನೀಡಲಾಯಿತು.