ಕುಂದಾಪುರ (ಜ.27): ಬೆಂಗಳೂರಿನ ರಾಜಭವನದಲ್ಲಿ ಇತ್ತೀಚೆಗೆ ನಡೆದ ಸ್ಕೌಟ್ ಹಾಗೂ ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಶ್ರೀ ಬಿ.ಎಮ್ ಸುಕುಮಾರ್ ಶೆಟ್ಟಿ ,ಪ್ರಾಂಶುಪಾಲರು, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳು ಅಭಿನಂದನೆ ಕೋರಿದ್ದಾರೆ.