ಕುಂದಾಪುರ ( ಫೆ.01): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ರಮೇಶ್ ಹಾಂಡ ಇವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ ಎಮ್ ಸುಕುಮಾರ್ ಶೆಟ್ಟಿ ,ಸಂಸ್ಥೆಯ ಪ್ರಾಂಶುಪಾಲರು ,ಭೋದಕ ಹಾಗೂ ಭೋಧಕೇತರ ವೃಂದ ಅಭಿನಂದನೆ ಕೋರಿದ್ದಾರೆ.