ಕುಂದಾಪುರ (ಜ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿರುವ ಕುಂದಾಪುರದ ವಿದ್ಯುತ್ ಗುತ್ತಿಗೆದಾರರೂ ಆಗಿರುವ ಕೆ. ರತ್ನಾಕರ್ ನಾಯಕ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಾರೆ, ಆರ್ಥಿಕವಾಗಿ ಸಭಲರಾಗುತ್ತಾರೆ, ಹಣವಂತರಾಗುತ್ತಾರೆ. ಆದರೆ ಹೃದಯವಂತರಾಗುವುದೂ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಆದರೆ ಇಂದಿನ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದೊಂದಿಗೆ, ಮೌಲ್ಯಾಧಾರಿತ ಶಿಕ್ಷಣ ನೀಡಿ, ಉತ್ತಮ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿ ಶಿಕ್ಷರಾಗಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷರಾಗಿರುವ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್ ಗಣರಾಜ್ಯೋತ್ಸವದ ಸಂದೇಶವನ್ನು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಶಿಕ್ಷಕಿ ಸುಗುಣಾ ಶೆಟ್ಟಿ ಕಾರ್ಯಕ್ರಮ ನಿರೋಪಿಸಿ ವಂದಿಸಿದರು.