ಕುಂದಾಪುರ(ಫೆ.03): ನನ್ನ ಜೀವನದಲ್ಲಿ ಇದೊಂದು ಅವಿಸ್ಮರಣೀಯ ಕ್ಷಣ. ಜೀವನದಲ್ಲಿ ಏನಾದರನ್ನು ಸಾಧಿಸುವ ಛಲ ಹೊಂದಿದ್ದೇನೆ. ಆದರೆ ಸಾಧನೆಯ ಪಥದ ಬಾಗಿಲು ನನ್ನ ಜೀವನದಲ್ಲಿ ಬೇಗನೆ ತೆರೆದಿದೆ. ಈ ಮೆರವಣಿಗೆ, ಸನ್ಮಾನ ಎನ್ನುವುದು ನನಗೆ ಸಾಧಿಸುವ ಜವಾಬ್ದಾರಿ ಇನ್ನೂ ಹೆಚ್ಚಾಗಿರಿಸಿದೆ ಎಂದು ರಾಷ್ಟçಮಟ್ಟದ ಕಲೋತ್ಸವದ ಶಾಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಹೇಳಿದರು.
ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರ ತಾಯಿ ನಾಟ್ಯ ವಿದುಷಿ ಪ್ರವಿತ ಅಶೋಕ್, ಪಾಠ ಪ್ರವಚನದ ಜೊತೆಗೆ ಪಠ್ಯೇತರ ಚಟುವಟಿಕೆಗಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಬದುಕಿನೊಂದಿಗೆ ಗೌರವಯುತ ಜೀವನ ನಡೆಸಬೇಕು ಎಂದರು.
ಸಂಸ್ಥೆಯ ಅಧ್ಯಕ್ಷರೂ ಹಾಗೂ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಸಾಧಕ ವಿದ್ಯಾರ್ಥಿನಿಯನ್ನು ಸನ್ಮಾನಿಸಿ, ಈ ಬಾರಿಯ ಕಂಚಿನ ಪದಕದ ಸಾಧನೆ ಮುಂದೆ ಚಿನ್ನವನ್ನೇ ಗೆಲ್ಲುವಂತಾಗಲಿ ಎಂದು ಹಾರೈಸಿದರು. ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿ ಮಾತನಾಡುತ್ತ ಗಾರ್ಗಿ ದೇವಿಯ ಸಾಧನೆ ಕೇವಲ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಗಳಿಗೆ ಮಾತ್ರವಲ್ಲ; ಕುಂದಾಪುರ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿ, ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಸ್ವಪ್ನ ಸತೀಶ್ ಮತ್ತು ದಿವ್ಯಾ ಎಚ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.