ಕುಂದಾಪುರ( ಫೆ.03): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು, ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ತುಮಕೂರು ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕg ಸಹಪಠ್ಯ ಚಟುವಟಿಕೆಗಳ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ಇವರನ್ನು ಸನ್ಮಾನಿಲಾಯಿತು.
ಸಂಸ್ಥೆಯ ಅಧ್ಯಕ್ಷರೂ ಹಾಗೂ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಸಾಧಕ ಶಿಕ್ಷಕರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿ, ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಸ್ವಪ್ನ ಸತೀಶ್ ಮತ್ತು ದಿವ್ಯಾ ಎಚ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.