ಕುಂದಾಪುರ (ಫೆಬ್ರವರಿ 15): ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿಯಲ್ಲಿ ನಡೆಯುತ್ತಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ-ಉಡುಪಿ, ಲಯನ್ಸ್ ಕ್ಲಬ್ ಶಿವಶಾಂತಿ ಮೊಳಹಳ್ಳಿ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಪ್ರಥಮ ದರ್ಜೆ ಗುತ್ತಿಗೆದಾರರಾದ ಅರುಣ್ ಕುಮಾರ್ ಹೆಗ್ಡೆ, ಯಡಾಡಿ ಮತ್ಯಾಡಿ ಶಿಬಿರವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಅಧ್ಯಕ್ಷ ಸುರೇಶ್ ಮಲ್ಯ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಶಿವಶಾಂತಿ, ಮೊಳಹಳ್ಳಿಯ ಅಧ್ಯಕ್ಷ ರತ್ನಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ದ್ಯಾವಲಬೆಟ್ಟು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಆಶಯ ನುಡಿಗಳನ್ನಾಡಿದರು.
ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ದಿನಪಾಲ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಇಲ್ಲಿನ ವೈದ್ಯಕೀಯ ಅಧೀಕ್ಷಕ ಡಾ| ನಾಗರಾಜ್ ಪೂಜಾರಿ, ರೋಟರಿ ಕ್ಲಬ್ನ ಕಾರ್ಯದರ್ಶಿ ರಮಾನಂದ ಕಾರಂತ್, ಪಶು ವೈದ್ಯಾಧಿಕಾರಿ ಡಾ| ಜಯಣ್ಣ, ನಾಗರಾಜ ಬಾಯರಿ ಮೊಳಹಳ್ಳಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ್ ಕುಲಾಲ್, ಉದ್ಯಮಿ ಶ್ರೀಧರ್ ಮಣಿಯಾಡಿ, ಸಂಜೀವಿನಿ ಸಂಘದ ಅಧ್ಯಕ್ಷೆ ವಿನೋದ ಶೆಟ್ಟಿ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಪ್ರಭಾವತಿ, ಶಾಲೆಯ ಎಸ್.ಡಿ.ಎಮ್.ಸಿ. ಸದಸ್ಯೆ ಗೀತಾ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಶಿಬಿರಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಬಿರಾರ್ಥಿಗಳಾದ ಪೂಜಾ ಆಚಾರ್ ತೆಕ್ಕಟ್ಟೆ ವಂದಿಸಿ, ಶಿಬಿರಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.