ಕುಂದಾಪುರ (ಫೆ.22) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “ಸರಿಗನ್ನಡಂ ಗೆಲ್ಗೆ” ಎಂಬ ವಿಷಯಾಧಾರಿತ ಸಂವಾದ ಕಾರ್ಯಾಗಾರ ಜರುಗಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾಗಿರುವ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇಷ್ಮಾ ಶೆಟ್ಟಿ ಆಗಮಿಸಿ, ಕನ್ನಡ ಭಾಷೆಯ ಹುಟ್ಟು, ಬೆಳವಣಿಗೆ, ಕನ್ನಡದ ಸೊಗಡು, ಸೊಬಗು, ಮಹತ್ವ ಮತ್ತು ವಿಶಿಷ್ಠತೆಗಳನ್ನು ಬಹಳ ಮಾರ್ಮಿಕವಾಗಿ ವಿದ್ಯಾರ್ಥಿಗಳಿಗೆ ಅರುಹಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ವಿ ಕಾರ್ಯಕ್ರಮ ನಿರೂಪಿಸಿದರು.