ಕುಂದಾಪುರ (ಮಾ.16): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್ ಅಂತರ್-ತರಗತಿ ಸ್ಪರ್ಧೆಯು ಮಾರ್ಚ್ 16ರಂದು ಕಾಲೇಜಿನ ಸಭಾಂಗಣದಲ್ಲಿ ಸಂಪನ್ನಗೊoಡಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತç ಉಪನ್ಯಾಸಕರಾದ ಅಕ್ಷತಾ, ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಶ್ರೀಮತಿ ಐಸಿರಿ ಶೆಟ್ಟಿ ಹಾಗೂ ಶ್ರೀ ಪ್ರಸನ್ನ ಶೆಟ್ಟಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ವಿದ್ಯಾರ್ಥಿ ಪ್ರತಿನಿಧಿಗಳಾದ ಚೇತನ್ ಶೆಟ್ಟಿ, ಪ್ರಜ್ಞಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾರ್ಚ್ 15 ಮತ್ತು 16ರಂದು ನಡೆದ ಈ ಅಂತರ್-ತರಗತಿ ಸ್ಪರ್ಧೆಯಲ್ಲಿ 10 ತಂಡಗಳು ಭಾಗವಹಿಸಿದ್ದು, “ಟೀಮ್ ಉತ್ಕರ್ಷ” ಚಾಂಪಿಯನ್ ಆಗಿ ಮೂಡಿ ಬಂದಿತು ಹಾಗೂ “ಟೀಮ್ ಅಮೋಘ” ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. ಪದವಿ ಪಡೆದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿಯವರನ್ನು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಅವಿತಾ ಎಮ್. ಕೊರೆಯಾ ಸ್ವಾಗತಿಸಿ, ಪ್ರಾಸ್ತ್ತಾವಿಸಿದರು. ಸಹ ಪ್ರಾಧ್ಯಾಪಕ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಪ್ರತಿನಿಧಿ ಪ್ರಜ್ಞಿತಾ ವಂದಿಸಿದರು. ವಿದ್ಯಾರ್ಥಿನಿ ಶ್ರದ್ದಾ ಆರ್. ನಿರೂಪಿಸಿದರು.