ಗಂಗೊಳ್ಳಿ ( ಮಾ.21): ಖ್ಯಾತ ಗಾಯಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿಯವರ 31 ವರ್ಷದ ಕಲಾ ಸೇವೆಯನ್ನು ಪರಿಗಣಿಸಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಜಿಲ್ಲೆ ಇವರು ಕೊಡಮಾಡುವ “ಸುವರ್ಣ ಕರ್ನಾಟಕ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮೇ ತಿಂಗಳಲ್ಲಿ ನಡೆಯುವ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.