ಕುಂದಾಪುರ(ಮಾ.30): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಗ್ರಾಜುಯೇಷನ್ ಡೇ ಸಮಾರಂಭ ಮಾರ್ಚ್ 24 ರoದು ನಡೆಯಿತು. ಡಾ.ಬಿ. ಬಿ. ಹೆ ಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿರುವ ಶ್ರೀಮತಿ ವೀಣಾ ಭಟ್ ಉದ್ಘಾಟಿಸಿದರು.
ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡುವುದರ ಮೂಲಕ ಮಕ್ಕಳನ್ನು ಮೊಬೈಲ್ ನಿಂದ ದೂರವಿರುವಂತೆ ನೋಡಿಕೊಳ್ಳಬಹುದೆಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಮಾತನಾಡಿ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಉತ್ತಮ ಸಂಸ್ಕಾರದ ಶಿಕ್ಷಣವನ್ನು ನೀಡುವುದರ ಮೂಲಕ ಭವಿಷ್ಯದಲ್ಲಿ ಉತ್ತಮ ಪ್ರಜೆಯನ್ನಾಗಿ ರೂಪಿಸಬಹುದು ಎಂದರು.
ಪುಟಾಣಿಗಳಾದ ಆರಾಧನ, ಅಥರ್ವ, ಶ್ರಾವ್ಯ, ಅಮೋಘ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯನಿ ಲತಾ ಜಿ ಭಟ್, ಸಂಸ್ಥೆಯ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ, ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಶ್ವೇತಾ ನಿರೂಪಿಸಿ, ವಂದಿಸಿದರು.