ಕಾರ್ಕಳ(ಏ,10): 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಶೇಕಡ 100 ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ ರಾಜ್ಯಕ್ಕೆ ತೃತೀಯ ರ್ಯಾಂಕ್ , ವಾಣಿಜ್ಯ ವಿಭಾಗದಲ್ಲಿ ಭಕ್ತಿ ಕಾಮತ್ ಹಾಗೂ ಎ ಎಸ್ ಚಿನ್ಮಯ್ ಆರನೇ ರ್ಯಾಂಕ್, ವಿಜ್ಞಾನ ವಿಭಾಗದಲ್ಲಿ ಸಿಂಚನ ಆರ್ ಎಚ್ ಏಳನೇ ರ್ಯಾಂಕ್, ಸುಜಿತ್ ಡಿ ಕೆ ಹಾಗೂ ಹಂಸಿನಿ ಎಂಟನೇ ರ್ಯಾಂಕ್, ವಾಣಿಜ್ಯ ವಿಭಾಗದಲ್ಲಿ ಅನನ್ಯ ಜೈನ್ ಒಂಬತ್ತನೇರ್ಯಾಂಕ್, ವಿಜ್ಞಾನ ವಿಭಾಗದಲ್ಲಿ ಪ್ರೇಮ್ ಸಾಗರ್ ಪಾಟೀಲ್ ಹಾಗೂ ವರ್ಷಾ ಎಚ್ ವಿ ಹತ್ತನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದ್ದು,ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.