ಕುಂದಾಪುರ (ಏಪ್ರಿಲ್ 30): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಮನಿಷ್ ಆಸ್ಪತ್ರೆಯ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ| ಪ್ರಮೀಳಾ ನಾಯಕ್ರವರು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಾಡುವ ಸಮಸ್ಯೆಗಳ ಬಗ್ಗೆ ಮಾತನಾಡಿ ಆರೋಗ್ಯ ಮತ್ತು ನೈರ್ಮಲ್ಯ ಉತ್ತಮ ಆರೋಗ್ಯದ ತಳಹದಿ. ಆಧುನಿಕತೆಯ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವoತ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಪ್ರಾಮುಖ್ಯತೆಯನ್ನು ನೀಡುವುದು ಅತ್ಯಂತ ಮುಖ್ಯವಾಗಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಹಿತಮಿತವಾದ ಉತ್ತಮ ಆಹಾರ, ಶುದ್ಧ ನೀರು, ನಿಯಮಿತವಾದ ವ್ಯಾಯಾಮ, ಯೋಗ ಅವಶ್ಯಕ ಎಂದರು.
ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರು ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಶ್ರೀಮತಿ ವೀಣಾ ವಾಸುದೇವ್ ಭಟ್ರವರು ಪ್ರಾಸ್ತಾವಿಸಿ, ಡಾ| ದೀಪಾ ವಂದಿಸಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.