ಕುಂದಾಪುರ (ಮೇ 09): ಸುಪ್ತವಾಗಿರುವ ಪ್ರತಿಭೆಗಳಿಗೆ ವೇದಿಕೆ ದೊರೆತಾಗ ವಿದ್ಯಾರ್ಥಿಗಳಲ್ಲಿನ ಸಭಾ ಕಂಪನ ಕಡಿಮೆಯಾಗಿ ಮುಂದೆ ಹಲವು ವೇದಿಕೆಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಪದವಿ ಶಿಕ್ಷಣದ ಸಂದರ್ಭದಲ್ಲಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದದ್ದು ಎಂದು ಕುಂದಾಪುರದ ವಸಂತನಾಟ್ಯಲಯದ ನೃತ್ಯ ತರಬೇತುದಾರರಾದ ಶ್ರೀಮತಿ ಪ್ರವಿತಾ ಅಶೋಕ್ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತç ಉಪನ್ಯಾಸಕ ಶ್ರೀ ಪ್ರಭಾಕರ್ ಶೆಟ್ಟಿಗಾರ್, ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ಶ್ರೀಮತಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಸಂಯೋಜಕಿ ಶ್ರೀಮತಿ ದೀಪಿಕಾ ಜಿ. ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ಸುಧೀರ್ ಕುಮಾರ್ ನಿರೂಪಿಸಿದರು.