ಕುಂದಾಪುರ (ಎ. 12): ಪ್ರಾಚ್ಯ ವಸ್ತುಗಳ ಪರಿಚಯ ಮತ್ತು ಅವುಗಳ ಉಪಯೋಗದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಮೂಲಕ ಪ್ರಾಚೀನ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಪ್ರಾಚ್ಯ ವಸ್ತು ಸಂಗ್ರಹ ಸ್ಪರ್ಧೆಯನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು.
ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಪತ್ರಕರ್ತ ಮಂಜುನಾಥ ಕಾಮತ್ ಹಾಗೂ ಶ್ರೀಮತಿ ನಿಮಿತಾ ಪಿ. ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಪ್ರೀತಿ ಹೆಗ್ಡೆ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಮಾಲತಿ ಅತಿಥಿಗಳನ್ನು ಪರಿಚಯಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ವಾಣಿಜ್ಯ ಉಪನ್ಯಾಸಕಿ ಶ್ರೀಮತಿ ಜ್ಯೋಸ್ಲಿನ್ ಕಾರ್ಯಕ್ರಮ ನಿರೂಪಿಸಿದರು.