ಕುಂದಾಪುರ (ಮೇ 17): ಕೊರಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿ ದೀಕ್ಷಿತ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ಹಿನ್ನೆಲೆಯಲ್ಲಿ ಕುಂದಾಪುರದ ಸಹಾಯಕ ಕಮಿಷನರ್ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತಾಧಿಕಾರಿ ಎಸ್. ಆರ್. ರಶ್ರೀ ರವರು ಸನ್ಮಾನಿಸಿ ಶುಭಹಾರೈಸಿದರು.
ದೀಕ್ಷಿತ್ ಮುಂದಿನ ದಿನಗಳಲ್ಲೂ ಉತ್ತಮ ಸಾಧನೆಗೈದು ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅವರು ಹೇಳಿದರು.