ಕುಂದಾಪುರ (ಮೇ 18): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಜನ್ನಾಲ್ ನ ಶಂಕರ ಪೂಜಾರಿ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10000 ರೂಪಾಯಿಯನ್ನು ಆವರ ಮಗಳಾದ ಕುಮಾರಿ ಶ್ರೀರಕ್ಷಾ ಇವರಿಗೆ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ಬಿ.ಬಿ ಹೆಗ್ಡೆ.ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.