ಗಂಗೊಳ್ಳಿ(ಮೇ,23):ಗಂಗೊಳ್ಳಿಯಲ್ಲಿ ವಾಸ್ತವ್ಯವಿರುವ ಮತ್ತು ಗಂಗೊಳ್ಳಿಯ ಪ್ರೌಢ ಶಾಲೆಯಲ್ಲಿ ಕಲಿತು 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರಥಮ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳು ಮತ್ತು ಪ್ರಸ್ತುತ ಗಂಗೊಳ್ಳಿಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ 2023-24 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದುಕೊಂಡು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮೇ 30-2024ರ ಒಳಗೆ ಹಿಂತಿರುಗಿಸಲು ಕೋರಲಾಗಿದೆ. ನಂತರ ಬರುವ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲ. ಸಂಬಂಧಿಸಿದ ಎಲ್ಲಾ ವಿಚಾರಗಳಲ್ಲೂ ಸಂಸ್ಥೆಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶ್ರೀ ಗೋಪಾಲ ಪೂಜಾರಿ 9964794645 ಅಥವಾ ಲಕ್ಷ್ಮಣ ಪೂಜಾರಿ ಇವರನ್ನು 8762409088 ಸಂಪರ್ಕಿಸತಕ್ಕದ್ದು.