ಕುಂದಾಪುರ (ಮೇ 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಕ್ವಲ್ ಅಪಾರ್ಚುನಿಟಿ ಸೆಲ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
ಶ್ರೀಮತಿ ಉಮಾಕಾಂತಿ, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಅವರು ಮಾತನಾಡಿ, ವಿದ್ಯಾರ್ಥಿ ನೆಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಕೌಶಲ್ಯಭರಿತರಾಗಬೇಕು ಎಂದರು. ಶ್ರೀಮತಿ ಸರಿತಾ, ಕೇಸ್ ವರ್ಕರ್, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀ ಹರೀಶ್ ಬಿ. ವಂದಿಸಿದರು. ವಿದ್ಯಾರ್ಥಿನಿ ಸಹನಾ ಪ್ರಾರ್ಥಿಸಿದರು. ಶೃದ್ಧಾ ಆರ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.