ಕುಂದಾಪುರ(ಜು,4): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಡಿಪಾರ್ಟ್ಮೆಂಟ್ ಆಫ್ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗದ ಆಶ್ರಯದಲ್ಲಿ ದಿನಾಂಕ 01 ಜೂನ್ ರಂದು ಅಂತಿಮ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೆಗಾ ಜಾಬ್ ಡ್ರೈವ್ 2024” ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಮುಖ್ಯ ಅತಿಥಿಗಳಾದ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ| ವೀಣಾ ಬಿ. ಕೆ. ಯವರು ” ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಕೌಶಲ್ಯದ ಮೂಲಕ ಸಿಕ್ಕಿದ ಅವಕಾಶವನ್ನು ಸದುಪಯೋಗ ಮಾಡಿಕೊಂಡಾಗ ಮಾತ್ರ ಇನ್ನಷ್ಟು ಅವಕಾಶಗಳನ್ನು ಪಡೆಯುವುದರ ಮೂಲಕ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ” ಎಂದರು.
ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.| ಚೇತನ್ ಶೆಟ್ಟಿ ಕೋವಾಡಿಯವರು ಸ್ವಾಗತಿಸಿದರು, ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರು ಮತ್ತು ಕಾರ್ಯಕ್ರಮದ ಸಂಯೋಜಕರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಾಣಿಜ್ಯ ಪ್ರಾಧ್ಯಾಪಕರಾದ ಸುಹಾಸ್ ಜೆ.ಜಿ. ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 25 ಕಂಪನಿಗಳು ನೋಂದಣಿ ಮಾಡಿಕೊಂಡಿದ್ದು, ಅಂತಿಮ ವರ್ಷzÀ ಪದವಿಯ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳುವುದು ವಿಶೇಷವಾಗಿತ್ತು. ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸ್ವಾತಿ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ಲೇಸ್ಮೆಂಟ್ ಆಫೀಸರ್ ಹರೀಶ್ ಕಾಂಚನ್ ವಂದಿಸಿದರು.