ಕುಂದಾಪುರ (ಜೂನ್ 05): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೇಚರ್ ಕ್ಲಬ್ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪ್ರಾಥಮಿಕ ಶಾಲೆ, ಯಡ್ತರೆಯ ಶಿಕ್ಷಕರಾದ ಶ್ರೀಮತಿ ಸಾರಿಕಾರವರು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳು ತಮ್ಮಿಂದ ಪರಿಸರಕ್ಕೆ ಕೊಡಬಹುದಾದ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಪ್ರಾಧ್ಯಾಪಕ ಶ್ರೀ ಸತೀಶ್ ಕಾಂಚನ್ ಉಪಸ್ಥಿತರಿದ್ದರು.ವಾಣಿಜ್ಯ ಪ್ರಾಧ್ಯಾಪಕರಾದ ಶ್ರೀ ಸುಧೀರ್ ಕುಮಾರ್ ಸ್ವಾಗತಿಸಿ, ಶ್ವೇತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿದರು.