ಕುಂದಾಪುರ (ಜೂನ್ 08): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್, ಎನ್.ಎಸ್.ಎಸ್. ಹಾಗೂ ರೋವರ್ಸ್-ರೇಂಜರ್ಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಜೂನ್ 08 ರಂದು ಜರಗಿತು.
ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವ ರೆಡ್ಕ್ರಾಸ್ ಕಾರ್ಯವೈಖರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಶ್ರೀ ರಾಮಕೃಷ್ಣ ಆಸ್ಪತ್ರೆ ಇಲ್ಲಿನ ವೈದ್ಯಾಧಿಕಾರಿ ಡಾ| ಸೋನಿ ಡಿ’ಕೋಸ್ಟಾ ಅವರು ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ-ಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ರಥಮ ಚಿಕಿತ್ಸೆ ಅರಿವು ಅತ್ಯವಶ್ಯಕ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ರೋವರ್ಸ್-ರೇಂಜರ್ಸ್ ಘಟಕದ ಸಂಯೋಜಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಶ್ರೀಮತಿ ಅವಿತಾ ಕೊರೆಯಾ ಉಪಸ್ಥಿತರಿದ್ದರು. ಕಾಲೇಜು ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿದರು. ವೈ.ಆರ್.ಸಿ. ಘಟಕದ ಸಂಯೋಜಕರಾದ ಮಾಲತಿ ವಂದಿಸಿದರು. ಪ್ರಥಮ ಬಿಬಿಎ ವಿದ್ಯಾರ್ಥಿ ಸುಹಾಸ್ ಮಲ್ಯ ಪ್ರಾರ್ಥಿಸಿದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿಯಾದ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.