ಮರವಂತೆ(ಜು,18): ರಕ್ತದಾನಿಗಳ ಬಳಗ ಮರವಂತೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ. ), ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಜೂನ್ ,16ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ. )ಉಡುಪಿ ಇದರ ಅಧ್ಯಕ್ಷರಾದ ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಶಿಬಿರ ಉದ್ಘಾಟಿಸಿದರು.
ಪ್ರಾಥಮಿಕ ಅರೋಗ್ಯ ಕೇಂದ್ರ ಮರವಂತೆ ಇದರ ವೈದ್ಯಾಧಿಕಾರಿ ಡಾ:ಗಣೇಶ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಅಧ್ಯಾಪಕರಾದ ಎಸ್ ಜನಾರ್ಧನ್ ಮರವಂತೆ, ಭಾರತೀಯ ರೆಡ್ ಕ್ರಾಸ ಸಂಸ್ಥೆ ಕುಂದಾಪುರದ ಚೇರ್ಮನ್ ಜಯಕರು ಶೆಟ್ಟಿ, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಮೀನುಗಾರರ ಸಹಕಾರಿ ಸಂಘ (ರಿ .),ಮರವಂತೆ ಇದರ ,ಅಧ್ಯಕ್ಷ ಪ್ರವೀಣ್ ಖಾರ್ವಿಹಾಗೂ ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಳೆದ 17 ವರ್ಷಗಳಿಂದ ರಕ್ತದಾನ ಕ್ಷೇತ್ರಸಲ್ಲಿ ಸಲ್ಲಿಸಿದ ಸೇವೆಗಾಗಿ ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ವರದಿ : ಈಶ್ವರ ನಾವುoದ