ಗಂಗೊಳ್ಳಿ(ಜು,17): ಯಾವುದೇ ವ್ಯಕ್ತಿ ಯಶಸ್ಸನ್ನು ಕಾಣಲು ಪರಿಶ್ರಮ ಮತ್ತು ಶಿಸ್ತು ಬಹಳ ಮುಖ್ಯ. ವಿದ್ಯಾರ್ಥಿಗಳು ಶಾಲೆಯ ಕಲಿಕೆಯ ಜೊತೆಯಲ್ಲಿ ಸ್ವಯಂ ಪರಿಶ್ರಮದಿಂದ ಜ್ಞಾನವನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಉಪನ್ಯಾಸಕ ಹೆಚ್ ಸುಜಯೀoದ್ರ ಹಂದೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕರಾದ ಪ್ರವೀಣ್ ಕಾಮತ್ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಹಾಗು ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗೆಗೆ ಮಾಹಿತಿ ನೀಡಿದರು. ಕಾಲೇಜು ಕಛೇರಿಯ ಪ್ರಬಂಧಕಿ ಪ್ರಮೋದ ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾಗಿ ಸಮೀಕ್ಷಾ ಮತ್ತು ವಿಶ್ವಾಸ್ ಉಪಸ್ಥಿತರಿದ್ದರು.
ಸರಸ್ವತಿ ವಿcದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಂಸ್ಕøತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ ಸ್ವಾಗತಿಸಿದರು. . ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ ಕಾರ್ಯಕ್ರಮ ನಿರ್ವಹಿಸಿದರು. ಗಣಕ ವಿಜ್ಞಾನ ಉಪನ್ಯಾಸಕ ವೆಂಕಟೇಶಮೂರ್ತಿ ಯು ವಂದಿಸಿದರು.