ಕುಂದಾಪುರ (ಜು,28): ವಿದ್ಯಾರ್ಥಿಗಳ ಸಾಧನೆಯು ನಮ್ಮ ಸಂಸ್ಥೆಗೆ ಹೆಮ್ಮೆ ತಂದಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಛಲವು ಸಾಧನೆಯ ಶಿಖರವನ್ನೇರಿಸಿದೆ. ಮುಂದೆಯೂ ಕೂಡ ಹೆಚ್ಚು ಹೆಚ್ಚು ಸಾಧಿಸುವ ಸಾಧಕರು ನೀವಾಗಿ ಭವಿಷ್ಯದಲ್ಲಿ ನಿಮಗೆ ಒಳ್ಳೆಯದಾಗಲಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.)ಯ ಸಂಚಾಲಕರು, ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿಯವರು ಮಾತನಾಡಿದರು.
ಅವರು ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಸಂಸ್ಥೆಗಳು 2024-25ನೇ ಸಾಲಿನಲ್ಲಿ ಆಯೋಜಿಸಿದ ಮೊದಲ ಶಿಕ್ಷಕ ರಕ್ಷಕರ ಸಭೆಯಲ್ಲಿ 2023-2024ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳು ಪುರಸ್ಕಾರವನ್ನು ಸ್ವೀಕರಿಸಿ, ತಮ್ಮ ಸಾಧನೆಗೆ ನೆರವಾದ ಗುರು ಹಿರಿಯರನ್ನು ಸ್ಮರಿಸಿಕೊಂಡರು.
ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯಲ್ಲಿ ಉಪಪ್ರಾಂಶುಪಾಲೆ, ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ, ಪ್ರೌಢ ಶಾಲಾ ವಿಭಾಗದ ಶೈಕ್ಷಣಿಕ ಸಂಯೋಜಕರಾದ ಪ್ರೀತೇಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್, ಪೂರ್ವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲತಾ ಭಟ್, ಸಹಾಯಕ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.