ಮೊಳಹಳ್ಳಿ (ಜು,02): ಇಂದಿನ ಆಧುನಿಕ ಜಗತ್ತಿಗೆ ಮುಕ್ತವಾಗಿ ತೆರೆದುಕೊಳ್ಳಲು ಇಂಗ್ಲಿಷ್ ಭಾಷೆಯ ಸಂವಹನ ಅಗತ್ಯವಾಗಿದ್ದು, ಇಂಗ್ಲಿಷ್ ಮಾಧ್ಯಮದ ಶಿಕ್ಷಣದಿಂದ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದು ತೋಟಗಾರಿಕೆ ಇಲಾಖೆಯ ನಿವೃತ್ತ ನಿರ್ದೇಶಕರಾದ ಶ್ರೀ ಜಯಶೀಲಶೆಟ್ಟಿ ಎಚ್ ಹೇಳಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿಯಲ್ಲಿ ಒಂದನೇ ತರಗತಿಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಚಾರಿಟೇಬಲ್ ಟ್ರಸ್ಟ್( ರಿ.) ಇದರ ಪ್ರವರ್ತಕರಾದ ಶ್ರೀ ದಿನೇಶ್ ಹೆಗ್ಡೆ ಎಂ. ಅವರು ಮಾತನಾಡಿ, ಶಿಕ್ಷಣ ಇಲಾಖೆಯು ಅಧಿಕೃತವಾಗಿ ನಮ್ಮ ಶಾಲೆಗೆ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಿರುವುದು ಸಂತೋಷವಾಗಿದೆ, ಇದರಿಂದ ಗ್ರಾಮೀಣ ಪ್ರದೇಶದ ಶಾಲೆಗಳು ಶೈಕ್ಷಣಿಕವಾಗಿ ಬಲವರ್ಧನೆ ಗೊಳ್ಳುವುದರ ಮೂಲಕ ಸರಕಾರಿ ಶಾಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಚೈತ್ರ ವಿವೇಕ ಅಡಪ, ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಮೊಳಹಳ್ಳಿ, ಶ್ರೀಮತಿ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು, ಶ್ರೀಮತಿ ವಾಣಿ ಆರ್ ಶೆಟ್ಟಿ, ಮಾಜಿ ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಮೊಳಹಳ್ಳಿ, ಶ್ರೀ ಗಣೇಶ್ ಕುಮಾರ್ ಶೆಟ್ಟಿ, ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ವಲಯ, ಶ್ರೀ ಗೋವಿಂದ ಎಸ್, ಮುಖ್ಯೋಪಾಧ್ಯಾಯರು ಇವರುಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಗೋವಿಂದ ಎಸ್ ಅವರು ಸ್ವಾಗತಿಸಿದರು. ಶಾಲೆಯ ಸಹ ಶಿಕ್ಷಕರಾದ ಶ್ರೀ ಗಣೇಶ್ ಶೆಟ್ಟಿ ನಿರೂಪಿಸಿದರು. ಸಹ ಶಿಕ್ಷಕಿ ಶ್ರೀಮತಿ ಪ್ರೀತಿ ಬಿ ಶೆಟ್ಟಿ ವಂದಿಸಿದರು. ಶಾಲೆಯ ಶಿಕ್ಷಕರುಗಳಾದ ಶ್ರೀ ವೆಂಕಟ ಕುಲಾಲ್, ಶ್ರೀಮತಿ ಶೋಭಾ ಸಿ ಶೆಟ್ಟಿ, ಶ್ರೀಮತಿ ಸುಜಾತ, ಶ್ರೀ ಆದರ್ಶ, ಶ್ರೀಮತಿ ಚೇತನ ಶೆಟ್ಟಿ ಸಹಕರಿಸಿದರು.