ಕುಂದಾಪುರ (ಜು, 02): ಡಾl ಬಿ ಬಿ ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಂತಿಮ ಬಿ ಬಿ ಎ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯತೆರಿಗೆ ಪಾವತಿ ಕುರಿತು ಅರಿವು ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.
ಸಿ. ಎ ಆನಂದ್ ತೀರ್ಥ ಉಡುಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಮಾಡುವಾಗ ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದ ರೈ ಉಪಸ್ಥಿತರಿದ್ದರು.