ಕುಂದಾಪುರ(ಜು.06): ಇಲ್ಲಿನ ಪ್ರತಿಷ್ಠಿತ ಕಾಲೇಜು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ನ ಸ್ನಾತಕೋತ್ತರ ಪದವಿಯನ್ನು ಪ್ರಾರಂಭಿಸಲು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎ ಐ ಸಿ ಟಿ ಈ )ಹೊಸದಿಲ್ಲಿ ಇವರಿಂದ ಅನುಮೋದನೆ ದೊರೆತಿದೆ.
ಈ ಕೋರ್ಸ್ ನ ಪದವಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ ಟಿ ಯು )ಅಡಿಯಿಂದ ನೀಡಲಾಗುವುದು. ಬಿ ಸಿ ಎ/ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಅಥವಾ ಸಮಾನಾಂತರ ವಿಷಯಗಳಲ್ಲಿ ಶೇಕಡ 50 ಮತ್ತು ಅಧಿಕ ಅಂಕಗಳೊಂದಿಗೆ ಪದವಿ ಮುಗಿಸಿದ ವಿದ್ಯಾರ್ಥಿಗಳು, ಈ ಶೈಕ್ಷಣಿಕ ವರ್ಷದಿಂದಲೇ ಪ್ರವೇಶಾ ತಿ ಪಡೆಯಲು ಅವಕಾಶವಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಕಾಲೇಜು ಕಚೇರಿಯನ್ನು ಸಂಪರ್ಕಿಸಿಲು ತಿಳಿಸಲಾಗಿದೆ.