ಗಂಗೊಳ್ಳಿ(ಜು,16): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2023-24ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಸ್ಥಾನದಿಂದ ಸುಮುಖ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ಬಿ.ಎಸ್.ಸುರೇಶ್ ಶೆಟ್ಟಿ ಮಾತನಾಡಿ ಬದುಕಿನಲ್ಲಿ ಏಳುಬೀಳುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ನಮ್ಮಲ್ಲಿರಬೇಕು. ಸೋಲಿಗೆ ಎದೆಗುಂದದೆ ನಿರಂತರ ಪರಿಶ್ರಮದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಯಶಸ್ಸು ನಮ್ಮದಾಗುತ್ತದೆ ಎಂದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕುಂದಾಪುರದ ಚಿನ್ಮಯ್ ಆಸ್ಪತ್ರೆಯ ನಿರ್ದೇಶಕ ಡಾ. ಉಮೇಶ್ ಪುತ್ರನ್ ಅವರ ವತಿಯಿಂದ ಸರಸ್ವತಿ ವಿದ್ಯಾಲಯದ ವಿಜ್ಞಾನದ ಪಿ.ಸಿ.ಎಮ್.ಬಿ ಮತ್ತು ಪಿ.ಸಿ.ಎಮ್.ಸಿ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದ ಹರ್ಷಿತ ಎಸ್ ಪೂಜಾರಿ ಮತ್ತು ಅಮೋಘ ದೇವಾಡಿಗ ಇವರಿಗೆ ಒಟ್ಟು 50,000 ರೂಪಾಯಿಗಳ ನಗದು ಬಹುಮಾನವನ್ನು ವಿತರಿಸಲಾಯಿತು.
ವಿಜ್ಞಾನ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಎಂಟನೇ ಸ್ಥಾನ ಗಳಿಸಿದ ಹರ್ಷಿತ ಎಸ್ ಪೂಜಾರಿ, ಒಂಬತ್ತನೇ ಸ್ಥಾನ ಗಳಿಸಿದ ನೇಹಾ ಎಸ್ ಕೊಡೇರಿ, ಹತ್ತನೇ ಸ್ಥಾನ ಗಳಿಸಿದ ಇಂಚರ ಆರ್ ದೇವಾಡಿಗ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಎಂಟನೇ ಸ್ಥಾನ ಗಳಿಸಿದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ದೀಕ್ಷಾ ವಿ ಕಾಮತ್ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಪ್ರಥಮ ಸ್ಥಾನಿ ಸಿಂಧು ಖಾರ್ವಿ ಇವರನ್ನು ಅಭಿನಂದಿಸಲಾಯಿತು.
ವಾಣಿಜ್ಯ ವಿಭಾಗದ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ಸನ್ನಿಧಿ ಹೊಳ್ಳ, , ಸಂಜನಾ ಎಸ್ ನಾಯ್ಕ್ ಮತ್ತು ಸಿಂಚನ ಇವರಿಗೆ ನಗರ ಕೃಷ್ಣಾನಂದ ಸುಬ್ರಾಯ ನಾಯಕ್ ಸಿ.ಎ ಬೆಂಗಳೂರು ಕೊಡಮಾಡಿದ ತಲಾ ಐದು ಸಾವಿರ ರೂಪಾಯಿಗಳ ನಗದು ಬಹುಮಾನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಒಟ್ಟು 87 ವಿದ್ಯಾರ್ಥಿ ಸಾಧಕರಿಗೆ ನಗದು ಪುರಸ್ಕಾರವನ್ನು ವಿತರಿಸಲಾಯಿತು. ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿಷಯಗಳ ಬೋಧಕರನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ಜಿ.ಎಸ್.ವಿ.ಎಸ್ ಅಸೋಷಿಯೇಷನ್ನ ಅಧ್ಯಕ್ಷ ಡಾ. ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಜಿ ಎಸ್ ವಿ ಎಸ್ ಅಸೋಸಿಯೇಷನ್ ನ ಸದಸ್ಯರಾದ ಕೆ ರಾಮನಾಥ ನಾಯಕ್ ಸ್ವಾಗತಿಸಿದರು. ಉಪನ್ಯಾಸಕಿ ಸುಗುಣ ಆರ್ ಕೆ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿಯರಾದ ಪವಿತ್ರ, ಪ್ರಫುಲ್ಲ , ಶಿಕ್ಷಕಿ ಸುಜಾತ ಪರಸ್ಕಾರ ಪಡೆದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿ ಅಶ್ಮಿತಾ ಪ್ರಾರ್ಥಿಸಿದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಶ್ರೀಲತಾ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಧ್ಯಾಯ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು . ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್ ಪ್ರಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ ಸಿ ವಂದಿಸಿದರು.