ಕುಂದಾಪುರ (ಆ .09): ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಕ್ಷಮತೆಯನ್ನು ಉನ್ನತಿ ಗೊಳಿಸುವುದಕ್ಕೆ ಶಿಕ್ಷಕರಾಗಿ ನಮ್ಮ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಪೋಷಿಸುವುದು ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಆಗಸ್ಟ್ 09 ರಂದು ಸಂಪನ್ನಗೊಂಡಿತು .
ಐ ಎಂ ಜೆ ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು “ಶಿಕ್ಷಕರು ನಿಷ್ಠೆ ಮತ್ತು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಿ, ತಮ್ಮ ಜ್ಞಾನ ಭಂಡಾರವನ್ನು ವಿಸ್ತರಿಸಿ, ವಿದ್ಯಾರ್ಥಿ ಮತ್ತು ಸಂಸ್ಥೆ ಗಾಗಿ ಕೆಲಸ ನಿರ್ವಹಿಸಬೇಕು ಶಿಕ್ಷಕ ಹೇಗೆ ತನ್ನ ಕಾರ್ಯದಕ್ಷತೆಯನ್ನು ಹೆಚ್ಚಿಸಬಹುದು ಎಂಬುದನ್ನು ತನ್ನ ಅನುಭವ ಮತ್ತು ಉದಾಹರಣೆಗಳ ಮೂಲಕ ತಿಳಿಸಿದರು.
ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಹಾಗೂ ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್ ಉಪಸ್ಥಿತರಿದ್ದರು. ಗಣಿತಶಾಸ್ತ್ರ ಉಪನ್ಯಾಸಕಿ ರಕ್ಷಿತಾ ಆರ್ ಅಡಿಗ ನಿರೂಪಿಸಿದರು.