ನಾವುಂದ(ಆ,13): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ ದೇವಾಡಿಗ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು.
ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಡಾ. ರಾಘವೇಂದ್ರ ಶೆಟ್ಟಿ ವಿದ್ಯಾರ್ಥಿಗೆ ಪ್ರೋತ್ಸಾಹಧನವನ್ನು ವಿತರಿಸಿದರು . ನಾವುಂದ ಸರಕಾರಿ ಕಾಲೇಜಿನ ಪ್ರಾಂಶುಪಾಲ ಗಣೇಶ್ ಎಮ್ ಶುಭ ಹಾರೈಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ನಿರೂಪಿಸಿ ವಂದಿಸಿದರು.